BREAKING NEWS

ಡೀಪ್ ಫೇಕ್ ಕೃತ್ಯಕ್ಕೆ ಕಡಿವಾಣ ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ. ನ್ಯಾಷನಲ್ ಕ್ರಸ್ ರಶ್ಮಿಕಾ ಮಂದಣ್ಣ ಅವರ  ಡೀಪ್‌ಫೇಕ್ ವಿಡಿಯೋ ವೈರಲ್ ಆದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.

ರಶ್ಮಿಕಾ ಮಂದಣ್ಣ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ಪ್ರಮುಖರು ಅಪರಾಧ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.  ಇಂಟರ್ ನೆಟ್ ಬಳಸುವ  ಎಲ್ಲಾ ಡಿಜಿಟಲ್ ನಾಗರಿಕರ ಸುರಕ್ಷತೆ ಮತ್ತು ನಂಬಿಕೆಯನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೋಮವಾರ ಭರವಸೆ ನೀಡಿದ್ದಾರೆ.

ಯಾವುದೇ ಬಳಕೆದಾರರಿಂದ ತಪ್ಪು ಮಾಹಿತಿ ಪೋಸ್ಟ್  ತಡೆಗಟ್ಟಲು ಮತ್ತು ಯಾವುದೇ ಬಳಕೆದಾರರು ಅಥವಾ ಸರ್ಕಾರದಿಂದ ವರದಿ ಮಾಡಿದಾಗ 36 ಗಂಟೆಗಳ ಒಳಗೆ ತಪ್ಪು ಮಾಹಿತಿಯನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಒಂದು ವೇಳೆ ಇದನ್ನು ಸಾಮಾಜಿಕ ಮಾಧ್ಯಮಗಳು ಅನುಸರಿಸದಿದ್ದರೆ ನಿಯಮ 7 ಅನ್ವಯಿಸುತ್ತದೆ ಮತ್ತು ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಗಳು, ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

2000 ರ ಐಟಿ ಕಾಯಿದೆ (ನಿಯಮ 3(1)(ಬಿ)(vii) ಪ್ರಕಾರ, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಸರಿಯಾದ ನಿಗಾ ವಹಿಸಬೇಕು. ಬಳಕೆದಾರರು ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವಂತಹ ಯಾವುದೇ ವಿಷಯವನ್ನು ಫೋಸ್ಟ್ ಮಾಡಬಾರದು. ಇಂತಹ ವಿಷಯದ ಕುರಿತು ದೂರು ಸ್ವೀಕರಿಸಿದ 24 ಗಂಟೆಗಳ ಒಳಗೆ ಅವುಗಳನ್ನು ತೆಗೆದುಹಾಕಲು ಅಥವಾ ನಿಷ್ಕ್ರಿಯಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ಇದಲ್ಲದೆ,  3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷದವರೆಗೆ ದಂಡವನ್ನು ಒಳಗೊಂಡಿರುವ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 66 ಡಿ ಪ್ರಕಾರ, ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವೈಯಕ್ತಿಕವಾಗಿ ವಂಚನೆಗೆ  3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ.

andolanait

Recent Posts

ಉಪ ಚುನಾವಣೆ: ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಆರ್.‌ ಅಶೋಕ್

ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…

13 mins ago

ಮೈಸೂರಿನ ಸರಸ್ವತಿ ಚಿತ್ರಮಂದಿರ ಇನ್ನು ನೆನಪು ಮಾತ್ರ: ಕಟ್ಟಡ ನೆಲಸಮ

ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್‌…

27 mins ago

ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…

3 hours ago

ರಂಗೇರಿದ ಜಾರ್ಖಂಡ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು…

3 hours ago

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಪರ ಬಿಜೆಪಿ ನಾಯಕರ ಪ್ರಚಾರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಕೇಂದ್ರ…

4 hours ago

ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಬೆದರಿಕೆ ಹಾಕಿದ್ದ ಮಹಿಳೆ ಬಂಧನ

ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ…

4 hours ago