ನವದೆಹಲಿ: ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವ ಯಾವುದೇ ವಿಡಿಯೋ ಅಥವಾ ಪೋಟೋ ಹಾಕದಂತೆ ಬಳಕೆದಾರರಿಗೆ ಸೂಚಿಸುವಂತೆ ಹಾಗೂ ಕಾನೂನಿನ ಪ್ರಕಾರ ದೂರುಗಳನ್ನು ಸ್ವೀಕರಿಸಿದ 24 ಗಂಟೆಗಳ ಒಳಗೆ ಅಂತಹ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಮಂಗಳವಾರ ನಿರ್ದೇಶನ ನೀಡಿದೆ. ನ್ಯಾಷನಲ್ ಕ್ರಸ್ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವೈರಲ್ ಆದ ನಂತರ ಸರ್ಕಾರ ಈ ಕ್ರಮ ಕೈಗೊಂಡಿದೆ.
ರಶ್ಮಿಕಾ ಮಂದಣ್ಣ ಅವರ ವಿಡಿಯೋ ವೈರಲ್ ಆಗುತ್ತಿದ್ದಂತೆ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ಪ್ರಮುಖರು ಅಪರಾಧ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇಂಟರ್ ನೆಟ್ ಬಳಸುವ ಎಲ್ಲಾ ಡಿಜಿಟಲ್ ನಾಗರಿಕರ ಸುರಕ್ಷತೆ ಮತ್ತು ನಂಬಿಕೆಯನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೋಮವಾರ ಭರವಸೆ ನೀಡಿದ್ದಾರೆ.
ಯಾವುದೇ ಬಳಕೆದಾರರಿಂದ ತಪ್ಪು ಮಾಹಿತಿ ಪೋಸ್ಟ್ ತಡೆಗಟ್ಟಲು ಮತ್ತು ಯಾವುದೇ ಬಳಕೆದಾರರು ಅಥವಾ ಸರ್ಕಾರದಿಂದ ವರದಿ ಮಾಡಿದಾಗ 36 ಗಂಟೆಗಳ ಒಳಗೆ ತಪ್ಪು ಮಾಹಿತಿಯನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಒಂದು ವೇಳೆ ಇದನ್ನು ಸಾಮಾಜಿಕ ಮಾಧ್ಯಮಗಳು ಅನುಸರಿಸದಿದ್ದರೆ ನಿಯಮ 7 ಅನ್ವಯಿಸುತ್ತದೆ ಮತ್ತು ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಗಳು, ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.
2000 ರ ಐಟಿ ಕಾಯಿದೆ (ನಿಯಮ 3(1)(ಬಿ)(vii) ಪ್ರಕಾರ, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಸರಿಯಾದ ನಿಗಾ ವಹಿಸಬೇಕು. ಬಳಕೆದಾರರು ಬೇರೊಬ್ಬರ ಮುಖವನ್ನು ಡೀಪ್ ಫೇಕ್ ಮಾಡುವಂತಹ ಯಾವುದೇ ವಿಷಯವನ್ನು ಫೋಸ್ಟ್ ಮಾಡಬಾರದು. ಇಂತಹ ವಿಷಯದ ಕುರಿತು ದೂರು ಸ್ವೀಕರಿಸಿದ 24 ಗಂಟೆಗಳ ಒಳಗೆ ಅವುಗಳನ್ನು ತೆಗೆದುಹಾಕಲು ಅಥವಾ ನಿಷ್ಕ್ರಿಯಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ಇದಲ್ಲದೆ, 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷದವರೆಗೆ ದಂಡವನ್ನು ಒಳಗೊಂಡಿರುವ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 66 ಡಿ ಪ್ರಕಾರ, ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ವೈಯಕ್ತಿಕವಾಗಿ ವಂಚನೆಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…