BREAKING NEWS

ಮೋಚಾ ಚಂಡಮಾರುತ : ಕೇರಳಕ್ಕೆ ಯೆಲ್ಲೋ ಅಲರ್ಟ್​ ಇನ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಹಳದಿ ಅಲರ್ಟ್​ ನೀಡಲಾಗಿದೆ.
ಮೇ 11 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡವು ಬುಧವಾರ ಚಂಡಮಾರುತವಾಗಿ ಬದಲಾಗಲಿದೆ ಎಂದು ಐಎಂಡಿ ತಿಳಿಸಿದೆ.
ಮೋಚಾ ಚಂಡಮಾರುತವು 2023 ರಲ್ಲಿ ಭಾರತಕ್ಕೆ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಚಂಡಮಾರುತದ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ.
IMD ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಹಿಮಾಚಲ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಮಳೆ ಜೊತೆಗೆ ಹಿಮಪಾತವೂ ಆಗಬಹುದು ಎನ್ನಲಾಗಿದೆ. ಅದೇ ವೇಳೆ ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಲಘು ಪ್ರಮಾಣದಲ್ಲಿ ಮಳೆಯಾಗಬಹುದು.
IMD ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ವಾತವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
lokesh

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

14 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

14 hours ago