ಮ್ಯಾನ್ಮಾರ್ : ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್‌ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್‌ಶಿಪ್‌ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…