ತೌಕ್ತೆ ಚಂಡಮಾರುತ: ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದ ಪರಿಣಾಮ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಈ ವಾರದಲ್ಲಿ ಮಳೆಯಾಗುವ ಸಾಧ್ಯತೆಯೂ ದಟ್ಟವಾಗಿದೆ. ಚಂಡಮಾರುತ ಮೇ 16ರ ಸುಮಾರಿಗೆ ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಮಳೆಯಾಗಲಿದೆ.

ಮೇ 15, 16ರಂದು ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ ಹಾಗೂ ಮಹಾರಾಷ್ಟ್ರ ಭಾಗದಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಂದಾಜಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

× Chat with us