BREAKING NEWS

ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ : 74 ಸಾವಿರ ಮಂದಿ ಸ್ಥಳಾಂತರ

ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್‌ ಚಂಡಮಾರುತ ಇಂದು ಸಂಜೆ ಗುಜರಾತ್‍ನ ಕಛ್ ತೀರಕ್ಕೆ ಅಪ್ಪಳಿಸಲಿದೆ.

ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್‌ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಗುಜರಾತ್‍ನ ಸೌರಾಷ್ಟ್ರ, ಕಛ್, ಜಾಮ್‍ನಗರ, ದ್ವಾರಕಾ ಸೇರಿ 8 ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರ ತೀರದಿಂದ 10 ಕಿ.ಮೀ. ಅಂತರದಲ್ಲಿನ ಸುಮಾರು 74 ಸಾವಿರ ಮಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ.

ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

18 ಎನ್‍ಡಿಆರ್‌ಎಫ್,12 ಎಸ್‌ಡಿಆರ್‌ಎಫ್‌, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರ ತಂಡಗಳು, 397 ವಿದ್ಯುತ್‌ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ವಾಯುಪಡೆ, ನೌಕಾಪಡೆಗೆ ಯಾವುದಕ್ಕೂ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ.

ಬಿರುಗಾಳಿಯಿಂದ ಈಗಾಗಲೇ ಗುಜರಾತ್‌ ತೀರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮೊಬೈಲ್‌ ಹಾಗೂ ಸ್ಥಿರ ದೂರವಾಣಿಯಲ್ಲಿ ಸಂಪರ್ಕ ವ್ಯತ್ಯಯವಾಗಲಿರುವ ಕಾರಣ ರಕ್ಷಣಾ ತಂಡಗಳಿಗೆ ಸ್ಯಾಟಲೈಟ್‌ ಫೋನ್‌ಗಳನ್ನು ನೀಡಲಾಗಿದೆ. ಶಾಲೆ ಮತ್ತು ಇತರ ಸಭಾಭವನದಂತಹ ದೊಡ್ಡ ಕಟ್ಟಡಗಳಲ್ಲಿ ತಾತ್ಕಾಲಿಕ ಆಶ್ರಯ ಶಿಬಿರ ನಿರ್ಮಾಣ ಮಾಡಲಾಗಿದೆ.

ಚಂಡಮಾರುತರದಿಂದ ಸಮುದ್ರ ಪ್ರಕ್ಷುಬ್ಧವಾಗಿದು ಸೌರಾಷ್ಟ್ರ ಮತ್ತು ಕಛ್‌ ತೀರದಲ್ಲಿ 6 ಅಡಿ ಎತ್ತರದ ಅಲೆಗಳು ಏಳಲು ಆರಂಭಿಸಿದೆ. ಇಂದು ಅಲೆಗಳ ಎತ್ತರ 9 ಅಡಿಗೆ ಹೋಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಗುಜರಾತ್ ಜೊತೆಗೆ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ತೀರದ ಮೇಲೂ ನಿಗಾ ಇಡಲಾಗಿದೆ.

lokesh

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

1 hour ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

2 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago