Mysore
34
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ಸಿಲಿಂಡರ್ ಸ್ಫೋಟ : 8 ಮನೆ ಅಗ್ನಿಗಹುತಿ – ಇಬ್ಬರಿಗೆ ಗಾಯ

ಬೆಂಗಳೂರು : ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಗೋದಾಮಿನಲ್ಲಿ ಎರಡು ಸಿಲಿಂಡರ್ ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಸಾಕೆಟ್ ಬೋರ್ಡ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮಹಿಳೆಯರು ಬೆಂಕಿ ಹೊತ್ತಿದ್ದ ಬಗ್ಗೆ ಮನೆಯಿಂದ ಹೊರಗೆ ಓಡಿ ಬಂದು ನನಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದ ಜೊತೆ ಬೆಂಕಿ ಹರಡಿತ್ತು. ತಕ್ಷಣ ಅಗ್ನಿಶಾಮಕ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!