ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.
ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್‍ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…