BREAKING NEWS

ರಹಸ್ಯ ಸ್ಥಳದಲ್ಲಿ ಮುಂದುವರೆದ ಡಿ.ಕೆ.ಶಿ ಆಪರೇಷನ್ ಹಸ್ತ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.

ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್‍ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

lokesh

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

52 mins ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

56 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

1 hour ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

7 hours ago