ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.
ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್‍ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.
ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.
ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.
ಅಧಿಕ ಗುರಿ ಪಡೆದ 5 ಜಿಲ್ಲೆಗಳು
ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ
ಬೆಂಗಳೂರು; 1,979; 10,000
ಬೆಳಗಾವಿ; 407; 700
ಮೈಸೂರು; 162; 700
ದಕ್ಷಿಣ ಕನ್ನಡ; 359; 500
ಕಲಬುರಗಿ; 245; 480
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…