BREAKING NEWS

ಪ್ರತಿನಿತ್ಯ 20 ಸಾವಿರ ಕೋವಿಡ್ ಪರೀಕ್ಷೆ ಗುರಿ

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.

ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ತಿಳಿಸಲಾಗಿದೆ.

ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್‍ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.

ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.

ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ.

ಅಧಿಕ ಗುರಿ ಪಡೆದ 5 ಜಿಲ್ಲೆಗಳು

ಜಿಲ್ಲೆ; ನಡೆಸುತ್ತಿರುವ ಪರೀಕ್ಷೆ ; ಗುರಿ

ಬೆಂಗಳೂರು; 1,979; 10,000

ಬೆಳಗಾವಿ; 407; 700

ಮೈಸೂರು; 162; 700

ದಕ್ಷಿಣ ಕನ್ನಡ; 359; 500

ಕಲಬುರಗಿ; 245; 480

lokesh

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

6 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

6 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

6 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago