BREAKING NEWS

ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆ

ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪುತ್ತೂರು, ಕುಂದಾಪುರ, ಮಾಣಿ, ಕಾರ್ಕಳ, ಭಾಗಮಂಡಲ, ಕೋಟ, ಪಣಂಬೂರು, ಹುಣಸೂರು, ತುಮಕೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು ಸಂಜೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕೆಲವೆಡೆ ಬಿರುಗಾಳಿ ಸಹಿತ ಮಳೆ ಸುರಿದ ಹಿನ್ನೆಲೆ ಬೆಟ್ಟಗುಡ್ಡಗಳು ಕುಸಿದಿವೆ. ಇನ್ನು ಕೆಲವೆಡೆ ಕೃಷಿ ಭೂಮಿಗಳು ಜಲಾವೃತ ಆದ ಘಟನೆಗಳು ನಡೆದಿವೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.

ಇನ್ನು ಮೋಕಾ ಚಂಡಮಾರುತ ಬಾಂಗ್ಲಾದೇಶ-ಮ್ಯಾನ್ಮಾರ್‌ ಗಡಿ ಭಾಗದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ, ಒಡಿಶಾ, ಬಾಂಗ್ಲಾ-ಮ್ಯಾನ್ಮಾರ್‌ನ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆರಂಭವಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ಸಹ ನೀಡಿದೆ.

ಚಂಡಮಾರುತವು ಪ್ರಸ್ತುತ ಕಾಕ್ಸ್ ಬಜಾರ್‌ನ ದಕ್ಷಿಣ-ನೈಋತ್ಯಕ್ಕೆ 700 ಕಿಲೋ ಮೀಟರ್‌ ದೂರದಲ್ಲಿ ಅಪ್ಪಳಿಸಲಿದೆ. ಕಳೆದ 6 ಗಂಟೆಗಳಲ್ಲಿ ಈ ಚಂಡಮಾರುತವು ನಿಧಾನವಾಗಿ ಈಶಾನ್ಯ ಕಡೆಗೆ 10 ಕಿಲೋ ಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಸೋಮವಾರ ಮಧ್ಯಾಹ್ನದ ವೇಳೆಗೆ ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಮ್ಯಾನ್ಮಾರ್ ನಡುವೆ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

lokesh

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

4 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

16 hours ago