Mysore
31
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ದಲಿತ ನಾಯಕ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ವಿಧಿವಶ !

ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್‌(76) ಇಂದು ವಿಧಿವಶರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಕಳೆದ ತಿಂಗಳಿನಿಂದ ಹೆಚ್ಚಾಗಿ ಕಾಲು ನೋವಿನಿಂದ ಹಗೂ ಹೆಚ್ಚಾದ ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪ್ರಸಾದ್‌ ಪುತ್ರಿ ಪ್ರತಿಮಾ ತಿಳಿಸಿದರು.

ಮೈಸೂರಿನ ಜಯಲಕ್ಷ್ಮಿಪುರಂನ ʼಭೀಮ ಸಧನʼ ನಿವಾಸದಲ್ಲ ವಿ.ಶ್ರೀನಿವಾಸ ಪ್ರಸಾದ್‌ ಅವ ಅಂತಿಮ ವಿಧಿವಿಧಾನಗಳ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

Tags:
error: Content is protected !!