ತಮಿಳುನಾಡು: ತಮಿಳು ನಟ ದಳಪತಿ ವಿಜಯ್ ಹಲವು ದಿನಗಳ ಕಾಯುವಿಕೆಯ ನಂತರ ತಾವು ರಾಜಕೀಯಕ್ಕೆ ಬರುವುದನ್ನು ಖಚಿತಪಡಿಸಿದ್ದಾರೆ. ನೂತನವಾಗಿ “ತಮಿಳುನಾಡು ವೆಟ್ರಿ ಕಳಗಂ” ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ.
ದಳಪತಿ ವಿಜಯ್ ತಮ್ಮ ಪಕ್ಷದ ಹೆಸರು ಘೋಷಣೆ ಮಾಡಿದ್ದು, ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದಿದೆ.
ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಸುಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
2024ರ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದೀಗ ನಟ ವಿಜಯ್ ತಮ್ಮ ಟಿವಿಕೆ ಪಕ್ಷ ಘೋಷಣೆ ಮಾಡಿದ್ದು, ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ.
ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…
ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…
ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…