ಮೈಸೂರು : ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…