BREAKING NEWS

ಅಮೆರಿಕದಲ್ಲಿ ದಾವಣಗೆರೆ ದಂಪತಿ ನಿಗೂಢ ಸಾವು ಪ್ರಕರಣ : ಪತ್ನಿ-ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

ದಾವಣಗೆರೆ : ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ ನಿಗೂಢ ಸಾವಿನ ವಿಚಾರ ಇದೀಗ ಬಹಿರಂಗಗೊಂಡಿದ್ದು, ಪುತ್ರ ಹಾಗೂ ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಹೊರ ಬಿದ್ದಿದೆ.

ಮೃತ ಯೋಗೇಶ್ ಹೊನ್ನಾಳ ದಾವಣಗೆರೆ ಜಿಲ್ಲೆಯ ಜಗಳೂರು (Jagaluru) ತಾಲೂಕಿನ ಹಾಲೆಕಲ್ಲು ಗ್ರಾಮದವರಾಗಿದ್ದು, ಎಂಜಿನಿಯರ್ ಪದವಿ ಪಡೆದಿದ್ದರು. ಪತ್ನಿ ಪ್ರತಿಭಾ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 9 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ ಯಶ್ ಎಂಬ 6 ವರ್ಷದ ಮಗ ಕೂಡಾ ಇದ್ದ. ಇಬ್ಬರ ಬದುಕು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ದಂಪತಿ ಯಾರೂ ಮನೆಯಿಂದ ಹೊರಗೆ ಬಾರದೇ ಇರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಳಿ ಬಂದು ಗಮನಿಸಿದಾಗ ಪೊಲೀಸರಿಗೆ ಮೂವರು ಮೃತಪಟ್ಟಿರುವುದು ಗೊತ್ತಾಗಿದೆ. ತಕ್ಷಣ ಬೆಂಗಳೂರಿನಲ್ಲಿ ಇದ್ದ ಯೋಗೇಶ್ ಸಹೋದರನಿಗೆ ಫೋನ್ ಮೂಲಕ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸಹೋದರ ದಾವಣಗೆರೆಯ ವಿದ್ಯಾನಗರದಲ್ಲಿ ವಾಸವಾಗಿರುವ ಯೋಗೇಶ್ ತಾಯಿ ಶೋಭಾ ಮತ್ತು ಪ್ರತಿಭಾಳ ತಂದೆ ಅಮರ್‌ನಾಥ್‌ಗೆ ವಿಷಯ ಮುಟ್ಟಿಸಿದ್ದಾರೆ.

ಆದರೆ ಬಾಲ್ಟಿಮೋರ್ ಕೌಂಟಿ ಪೊಲೀಸರು ಪ್ರಾಥಮಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಪತಿ ಮತ್ತು ಪತ್ನಿಯ ನಡುವಿನ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಪುತ್ರ ಯಶ್ ಹಾಗೂ ಪತ್ನಿ ಪ್ರತಿಭಾಳ ಹತ್ಯೆ ನಡೆಸಿ ನಂತರ ಪತಿ ಯೋಗೇಶ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ. ಆಗಸ್ಟ್ 15ರಂದು ರಾತ್ರಿ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದ್ದು, ಆಗಸ್ಟ್ 18ರಂದು ಬಾಲ್ಟಿಮೋರ್ ಪೊಲೀಸರಿಂದ ಘಟನೆ ಕುರಿತು ಮಾಹಿತಿ ಹೊರಬಿದ್ದಿತ್ತು.

ಮೂರು ಜನರ ಮೃತದೇಹವನ್ನು ದಾವಣಗೆರೆಗೆ ತರಿಸಬೇಕು ಎಂದು ಯೋಗೇಶ್ ತಾಯಿ ಶೋಭಾ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಇವರ ಮನವಿಯನ್ನು ವಿದೇಶಾಂಗ ಸಚಿವಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಕುಟುಂಬದ ಕೋರಿಕೆ ಮೇರೆಗೆ ಅಮೆರಿಕದಲ್ಲಿರುವ ಕನ್ಸಲ್ ಜನರಲ್ ಮಂಜುನಾಥ್, ಡೆಪ್ಯೂಟಿ ಜನರಲ್ ವರುಣ್ ಅವರನ್ನು ಆನ್‌ಲೈನ್ ಮುಖಾಂತರ ಸಂಪರ್ಕ ಮಾಡಿದ್ದೇವೆ. ಅಲ್ಲದೇ ಕೌನ್ಸಿಲ್ ಮಾಹಿತಿ ರವಾನೆ ಮಾಡಲಾಗಿದೆ. ಮೃತದೇಹವನ್ನು ದಾವಣಗೆರೆಗೆ ತರುವ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

lokesh

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

4 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

4 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

5 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

6 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

6 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

7 hours ago