Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಯೋಗಿ ಆದಿತ್ಯನಾಥ್‍ಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ : ಪ್ರಕರಣ ದಾಖಲು

ಲಕ್ನೋ –  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಅಪರಿಚಿತ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿರುವ ಸಂಖ್ಯೆ 112ಗೆ ಸಂದೇಶದ ಮೂಲಕ ನಾನು ಸಿಎಂ ಆದಿತ್ಯ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ ಎಂದು ವ್ಯಕ್ತಿ ಹೇಳಿದ್ದಾನೆ.ಬೆದರಿಕೆ ಬಂದ ನಂತರ,112 ನ ಆಪರೇಷನ್ ಕಮಾಂಡರ್ ಸುಶಾಂತ್ ಸಿಟಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506, 507 ಮತ್ತು ಐಟಿ ಕಾಯ್ದೆ 66 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಿನ್ನೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಕಳೆದ ವಾರ ಪತ್ರವೊಂದು ಬಂದಿತ್ತು ಎಂದು ಹೇಳಿದ್ದರು.
ಪ್ರಧಾನಿ ವಿರುದ್ಧ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕ್ಸೇವಿಯರ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಕಾರಣ ವೈಯಕ್ತಿಕ ದ್ವೇಷ, ಬಲೆಗೆ ಬೀಳಿಸಲು ಪತ್ರ ಬರೆದಿದ್ದಾರೆ ಎಂದು ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ.ಸೇತು ರಾಮನ್ ತಿಳಿಸಿದ್ದಾರೆ.
ಕೊಚ್ಚಿಗೆ ಆಗಮಿಸುವ ಪ್ರಧಾನಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇದಕ್ಕಾಗಿ 2060 ಪೊಲೀಸರನ್ನು ನೇಮಿಸಲಾಗಿದೆ. ಇದರ ಭಾಗವಾಗಿ ಮಧ್ಯಾಹ್ನ 2 ಗಂಟೆಯಿಂದ ಸಂಚಾರ ನಿಯಂತ್ರಣವನ್ನೂ ಹೇರಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!