BREAKING NEWS

ಐದು ಗ್ಯಾರಂಟಿ ಘೋಷಣೆ| ಜೂ.11 ರಿಂದ ಉಚಿತ ಪ್ರಯಾಣ, ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ  ಜಾರಿ ಮಾಡಲಾಗುವುದು ಎಂದರು. 12 ತಿಂಗಳ ಸರಾಸರಿ ಆಧರಿಸಿ, ಅದಕ್ಕೆ ಶೇಕಡಾ 10 ರಷ್ಟು ಸೇರಿಸಿ, ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು,

ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು.ಜುಲೈ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ ನಿಂದ ಅನ್ವಯವಾಗಲಿದೆ. ಬಾಡಿಗೆದಾರರಿಗೂ  ಈ ಯೋಜನೆ  ಅನ್ವಯವಾಗಲಿದೆ ಎಂದರು. ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಎಂದ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಎರಡನೇ ಯೋಜನೆ ‘ಗೃಹಲಕ್ಷ್ಮಿ’ಯನ್ನು ಆಗಸ್ಟ್ 15 ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ ಬಿಪಿಎಲ್ , ಎಪಿಎಲ್ ಖಾತೆದಾರರ ಮನೆ ಯಜಮಾನಿ ಖಾತೆಗೆ ಹಣ ಮಾಡಲಾಗುವುದು, ಆದರೆ, ಯೋಜನೆ ಫಲಾನುಭವಿಗಳು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು, ಜೂನ್ 15 ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು. ಸಾಮಾಜಿಕ ಭದ್ರತೆ ಪಿಂಚಣಿದಾರರಿಗೂ  ಈ ಯೋಜನೆ ಅನ್ವಯವಾಗಲಿದೆ ಎಂದರು.

3ನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಡಿ ಜುಲೈ 1 ರಿಂದ ಎಲ್ಲಾ ಬಿಪಿಎಲ್ ಕಾರ್ಡ್ ದಾರರು ಮತ್ತು ಅಂತ್ಯೋದಯ ಫಲಾನುಭವಿಗಳಿಗೆ ತಲಾ 10  ಕೆಜಿ ಅಕ್ಕಿ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

4ನೇ ಗ್ಯಾರಂಟಿ  ಶಕ್ತಿ: ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದಲ್ಲಿನ ಎಲ್ಲಾ ಮಹಿಳೆಯರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ  ಈ ತಿಂಗಳು 11 ನೇ ತಾರೀಖು ಚಾಲನೆ ನೀಡಲಾಗುವುದು,  ಬೆಂಗಳೂರಿನಿಂದ ತಿರುಪತಿ, ಬೆಂಗಳೂರಿನಿಂದ ಹೈದರಾಬಾದ್‌ಗೆ ಅವಕಾಶವಿಲ್ಲ.  ಎಸಿ ಮತ್ತು ಲಕ್ಸುರಿ ಬಸ್ ಹೊರತುಪಡಿಸಿ ಸಾಮಾನ್ಯ ಬಸ್ ಗಳಿಗೆ ಮಾತ್ರ ಅನ್ವಯವಾಗಲಿದೆ. ಕೆಎಸ್ ಆರ್ ಟಿ ಸಿ ಬಸ್ ನಲ್ಲಿ ಶೇ.50 ರಷ್ಟು ಸೀಟು ಪುರುಷರಿಗೆ ಮೀಸಲು, ಐರಾವತ, ರಾಜಹಂಸ ಸೇರಿ ಎಲ್ಲ ರೀತಿಯ ಲಕ್ಸ್ಯೂರಿ, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್ ಗಳಿಗೆ ಇದು ಅನ್ವಯವಾಗಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

5ನೇ ಗ್ಯಾರಂಟಿ ಯುವನಿಧಿ: 2022-23ರಲ್ಲಿ ಪಾಸ್ ಆದ ಪದವೀಧರ ನಿರುದ್ಯೋಗಿಗಳಿಗೆ ನೋಂದಣಿಯಾದ 24 ತಿಂಗಳ ವರಗೆ ಪ್ರತಿ ತಿಂಗಳಿಗೆ 3,000 ಮತ್ತು ಡಿಪ್ಲೋಮಾ ಮಾಡಿದವರಿಗೆ 1500 ಗೌರವ ಧನ ನೀಡಲಾಗುವುದು ಎಂದ ಮುಖ್ಯಮಂತ್ರಿ ತಿಳಿಸಿದರು.

ವೃತ್ತಿಪರ ಶಿಕ್ಷಣ ಸೇರಿದಂತೆ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಇದು ಅನ್ವಯವಾಗಲಿದೆ. ತೃತೀಯ ಲಿಂಗಿಗಳಿಗೂ ಕೂಡಾ ಈ ಯೋಜನೆ ಅನ್ವಯ ನಿರುದ್ಯೋಗ ಭತ್ಯೆ ನೀಡಲಾಗುವುದು, ಇದಕ್ಕಾಗಿ ಅರ್ಜಿ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಪಪಡಿಸಿದರು.

andolanait

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

26 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago