ಕಲಬುರಗಿ : ಕೆಪಿಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಮೋದಿಗೆ ವಿಷ ಸರ್ಪ ಎಂದು ಹೇಳಿ ಅವಮಾನ ಮಾಡಿದ್ದಾರೆ. ಮೋದಿಯವರನ್ನು ಅವಮಾನ ಮಾಡುವುದು ಅಂದರೆ ಅದು ದೇಶಕ್ಕೆ ಅವಮಾನ ಮಾಡಿದಂತೆ. ಮೋದಿ ಅವರನ್ನು ವಿಷ ಸರ್ಪಕ್ಕೆ ಹೋಲಿಸುವ ಮೂಲಕ ಖರ್ಗೆ ದೇಶಕ್ಕೇ ಅವಮಾನ ಮಾಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಈ ವಿಧಾನಸಭಾ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮಾಡಿ, ಹೀನಾಯವಾಗಿ ಸೋಲಿಸಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರೆಕೊಟ್ಟರು.
ಚಿತ್ತಾಪುರ ಕ್ಷೇತ್ರ ವ್ಯಾಪ್ತಿಯ ವಾಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಪರ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ದೇಶಕ್ಕೆ ಅಪಮಾನ ಮಾಡಿದವರು ಅಧ್ಯಕ್ಷರಾಗಿರುವ ಕಾಂಗ್ರೆಸ್ ಈ ಚುನಾವಣೆಯಲ್ಲಿ ಗೆಲ್ಲಬೇಕಾ? ಆ ಪಕ್ಷದವರನ್ನು ಹೀನಾಯವಾಗಿ ಸೋಲಿಸುವ ಮೂಲಕ ದೇಶ ವಿರೋಧಿ ಮಾತು ಆಡುವವರಿಗೆ ತಕ್ಕ ಶಾಸ್ತಿ ಮಾಡಿ ಎಂದರು.
ಭಗವಾನ್ ರಾಮನ ಭೂಮಿ ಅಯೋಧ್ಯೆಯಿಂದ ಇಲ್ಲಿಗೆ ಬಂದಿದ್ದೇನೆ. ಭಗವಾನ್ ರಾಮನಿಗೆ ಆಂಜನೇಯ ಸಿಕ್ಕಿರುವುದು ಇದೇ ಕರ್ನಾಟಕದ ಭೂಮಿಯಲ್ಲಿ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿದೆ. ರಾಮನಿಗೆ ಸಂಕಟ ಬಂದಾಗ ಹನುಮ ಹೇಗಿದ್ದನೋ ಹಾಗೆಯೇ ದೇಶಕ್ಕೆ ಸಂಕಟ ಬಂದಾಗ ಪ್ರಧಾನಿ ಮೋದಿ ಹನುಮನ ರೀತಿ ರಕ್ಷಣೆಗೆ ಧಾವಿಸುತ್ತ ದೇಶದ ಜೊತೆಗಿದ್ದಾರೆ. ಇಂಥ ದೇಶಭಕ್ತನಿಗೆ ನಿಂದಿಸೋದು ಮಹಾ ಅಪರಾಧ ಎಂದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…