ಸೂರತ್: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13ಕ್ಕೆ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಕೋಲಾರದಲ್ಲಿ ಭಾಷಣ ಮಾಡಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಅದನ್ನು ಪ್ರಶ್ನಿಸಿ ಸೂರತ್ (ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯ ಮಾ.23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನಲ್ಲಿರಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಇಂದು ಸೂರತ್‌ಗೆ ಆಗಮಿಸಿದ ರಾಹುಲ್, ತಮಗೆ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.





