Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಮಾನಹಾನಿ ಪ್ರಕರಣ: ರಾಹುಲ್‌ ಖುದ್ದು ಹಾಜರಿಗೆ ವಿನಾಯಿತಿ

ರಾಂಚಿ: ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ಜಾರ್ಖಂಡ್‌ ಹೈಕೋರ್ಟ್‌ ಮಂಗಳವಾರ ವಿನಾಯಿತಿ ನೀಡಿದೆ.

2019ರ ಏಪ್ರಿಲ್‌ ನಲ್ಲಿ ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ರಾಹುಲ್‌ ಪ್ರಶ್ನಿಸಿದ್ದರು. ಈ ಸಂಬಂಧ ಪ್ರದೀಪ್‌ ಮೋದಿ ಎಂಬುವವರು ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ರಾಂಚಿ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶೀಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರಿ ವಿಚಾರಣೆ ನಡೆಸಿದ ನ್ಯಾ. ಎಸ್‌.ಕೆ.ದ್ವಿವೇದಿ ಅವರು, ರಾಹುಲ್‌ಗೆ ವಿನಾಯಿತಿ ನೀಡಿ ಆಗಸ್ಟ್‌ 16ಕ್ಕೆ ವಿಚಾರಣೆಯನ್ನು ಮುಂದೂಡಿದರು.

ರಾಹುಲ್‌ ಹೇಳಿಕೆ ವಿರುದ್ಧ ಗುಜರಾತ್‌ನ ಸೂರತ್‌(ಪಶ್ಚಿಮ) ಕ್ಷೇತ್ರದ ಶಾಸಕ ಪೂರ್ಣೇಶ್‌ ಗಾಂಧಿ ಕೂಡ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯವು ರಾಹುಲ್‌ ಗಾಂಧಿ ಅವರಿಗೆ ಮಾರ್ಚ್‌ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಹಾಗಾಗಿ, ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!