ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸಭೆ

ಹೊಸದಿಲ್ಲಿ: ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಬಗ್ಗೆ ನಿರ್ಧರಿಸಲು ಇಂದು (ಭಾನುವಾರ) ಉನ್ನತ ಮಟ್ಟದ ಸಭೆ ನಡೆಯಲಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸಭೆ ಜರುಗಲಿದೆ. ಸಭೆಯಲ್ಲಿ ಕೇಂದ್ರ ಸಚಿವರಾದ ರಮೇಶ್ ಪೋಖ್ರಿಯಾಲ್‌, ಸ್ಮೃತಿ ಇರಾನಿ, ಪ್ರಕಾಶ್‌ ಜಾವಡೇಕರ್‌, ರಾಜ್ಯಗಳ ಶಿಕ್ಷಣ ಸಚಿವರು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರುಗತಿಯಲ್ಲಿದ್ದ ಕಾರಣ ಏಪ್ರಿಲ್‌ 14ರಂದು ಶಿಕ್ಷಣ ಸಚಿವಾಲಯವು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು ಹಾಗೂ ಜೂನ್‌ 1ರ ಬಳಿಕ ಪರಿಸ್ಥಿತಿಯ ಅವಲೋಕನ ನಡೆಸಿ ನಿರ್ಧರಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿತ್ತು.

ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಬಹುತೇಕರು ಪರೀಕ್ಷೆ ರದ್ದು ಪಡಿಸುವಂತೆ ಕೇಳುತ್ತಿದ್ದರೆ, ಶಾಲಾ ಪ್ರಾಂಶುಪಾಲರ ಪೈಕಿ ಭಿನ್ನ ನಿಲುವು ವ್ಯಕ್ತವಾಗಿದೆ.

× Chat with us