ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಚೇರಿಯೊಳಗೆ ನುಗ್ಗಿದ್ದು, ಮಟಿಯಾಲ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಮೇಲೆ ನಾಲ್ಕೈದು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಕೃತ್ಯದಲ್ಲಿ ಮೂವರು ಆರೋಪಿಗಳು ಭಾಗವಹಿಸಿದ್ದಾರೆ. ಇಬ್ಬರು ಆರೋಪಿಗಳು ಮಟಿಯಾಲರನ್ನು ಹತ್ಯೆ ಮಾಡುವುದಕ್ಕಾಗಿ ಕಚೇರಿಗೆ ಪ್ರವೇಶಿಸಿದರೆ, ಮತ್ತೊಬ್ಬ ಆರೋಪಿ ಕಚೇರಿ ಹೊರಗಡೆ ಬೈಕ್‌ನಲ್ಲಿ ಕಾಯುತ್ತಿದ್ದ. ಘಟನೆ ಬಳಿಕ ಮೂವರೂ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಟಿಯಾಲ ಅವರ ಕುಟುಂಬಸ್ಥರು ಯಾವುದೇ ಶಂಕಿತರನ್ನು ಹೆಸರಿಸದಿದ್ದರೂ, ಮಟಿಯಾಲ ಅವರು ಕೆಲವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಹಾಗಾಗಿ ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಹರ್ಷ ವರ್ಧನ್ ಹೇಳಿದ್ದಾರೆ.
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ,…
ಮೈಸೂರು: ನಾಲ್ಕು ದಶಕಕ್ಕೂ ಹೆಚ್ಚು ಕಾಲ ಜನರನ್ನು ರಂಜಿಸಿದ್ದ ನಗರದ ಸರಸ್ವತಿ ಚಿತ್ರಮಂದಿರ ನೆನಪಿನಂಗಳಕ್ಕೆ ಸರಿಯುತ್ತಿದೆ. ಪ್ರೇಕ್ಷಕರ ಕೊರತೆಯಿಂದ ಕೋವಿಡ್…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಅನೇಕ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.…
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು…
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕೇಂದ್ರ…
ಮುಂಬೈ: ಇನ್ನು 10 ದಿನದೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಹತ್ಯೆ ಮಾಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲೆ…