ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಗುರುವಾರ ಬಂಧಿಸಿದೆ.
ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಭತ್ತು ಬಾರಿ ಇ.ಡಿ ಸಮನ್ಸ್ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು.
ಇದರ ಬೆನ್ನಲ್ಲೇ 12 ಜನ ಇಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಮೊರೆ ಹೋಗಿದ್ದಾರೆ.