BREAKING NEWS

ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಸಿಎಂ ಕೇಜ್ರಿವಾಲ್‌ ಬಂಧನ!

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಗುರುವಾರ ಬಂಧಿಸಿದೆ.

ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್‌ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್‌ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಭತ್ತು ಬಾರಿ ಇ.ಡಿ ಸಮನ್ಸ್‌ ನೀಡಿದೆ. ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಿಸಿತ್ತು.

ಇದರ ಬೆನ್ನಲ್ಲೇ 12 ಜನ ಇಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್‌ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬಳಿಕ ಕೇಜ್ರಿವಾಲ್‌ ಅವರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಕೇಜ್ರಿವಾಲ್ ಸುಪ್ರೀಂ ಮೊರೆ ಹೋಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

3 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

3 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

3 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

5 hours ago