Mysore
22
overcast clouds

Social Media

ಸೋಮವಾರ, 10 ನವೆಂಬರ್ 2025
Light
Dark

ದೆಹಲಿ ಅಬಕಾರಿ ಹಗರಣ: ಜೂನ್.2ರವರೆಗೆ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ .2ವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧನಕ್ಕೊಳಪಡಿಸಿದೆ.

ಇತ್ತೀಚೆಗೆ ರದ್ದಾದ ದೆಹಲಿ ಅಬಕಾರಿ ನೀತಿ 2021-22 ಅನ್ನು ರಾಷ್ಟ್ರ ರಾಜಧಾನಿಯಲ್ಲಿನ ಮದ್ಯದ ವ್ಯಾಪಾರದಲ್ಲಿ ಕಾರ್ಟಲೈಸೇಶನ್ (ಉತ್ಪಾದಕರು, ಮಾರಾಟಗಾರರು, ವಿತರಕರು, ವ್ಯಾಪಾರಿಗಳು ಅಥವಾ ಸೇವಾ ಪೂರೈಕೆದಾರರ ಗುಂಪು) ಮತ್ತು ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ಕುಶಲತೆಯಿಂದ ದುರ್ಬಳಕೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಉದ್ಯಮಿ ವಿಜಯ್ ನಾಯರ್ ಪ್ರಮುಖ ಪಾತ್ರವಿದೆ ಎಂದು ಸಿಬಿಐ ಈ ಹಿಂದೆ ಹೇಳಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!