Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದರು. ಅವರು ಈ ಹಂತದಲ್ಲಿ ಜಾಮೀನು ಪಡೆಯಲು ಅರ್ಹರಲ್ಲ ಎಂದು ಹೇಳಿದರು.

ಸಿಸೋಡಿಯಾ ಅವರಲ್ಲದೆ, ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಹ ಆರೋಪಿಗಳಾದ ಉದ್ಯಮಿಗಳಾದ ಅಭಿಷೇಕ್ ಬೋನಪಲ್ಲಿ, ಬೆನೊಯ್ ಬಾಬು ಮತ್ತು ವಿಜಯ್ ನಾಯರ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಸಿಸೋಡಿಯಾ ಅವರನ್ನು ಫೆಬ್ರುವರಿ 26 ರಂದು ಸಿಬಿಐ ಮೊದಲ ಬಾರಿಗೆ ಬಂಧಿಸಿತು ಮತ್ತು ಅಂದಿನಿಂದ ಅವರು ಬಂಧನದಲ್ಲಿದ್ದಾರೆ.

ಸಿಬಿಐ ಪ್ರಕರಣದಲ್ಲಿ ಈಗಾಗಲೇ ಮೇ 30ರಂದು ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಇ.ಡಿ ದಾಖಲಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಬಂಧಿಸಲಾಯಿತು ಮತ್ತು ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೆಹಲಿ ಸರ್ಕಾರವು ನವೆಂಬರ್ 17, 2021 ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತು. ಆದರೆ, ಭ್ರಷ್ಟಾಚಾರದ ಆರೋಪಗಳ ನಡುವೆ ಸೆಪ್ಟೆಂಬರ್ 2022 ರ ಕೊನೆಯಲ್ಲಿ ಅದನ್ನು ರದ್ದುಗೊಳಿಸಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ