ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.
42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ತಿಳಿಸಿದರು.
ಮಾಲಿನ್ಯವನ್ನು ಕಡಿಮೆಗೊಳಿಸಲು ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಆರಂಭಿಸಿದೇವು. 2020ರಲ್ಲಿ ವಿದ್ಯುತ್ ವಾಹನಗಳಿಗಾಗಿ ನೀತಿಯೊಂದನ್ನು ರೂಪಿಸಿದೇವು ಮತ್ತು 2025 ರ ವೇಳೆಗೆ ದೆಹಲಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಎಲೆಕ್ಟ್ರಿಕ್ ಆಗಿರುವ ಗುರಿ ಹೊಂದಿದ್ದೇವೆ ಎಂದರು.
ದೆಹಲಿಯನ್ನು ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ 2020ರಲ್ಲಿ ದೆಹಲಿ ವಿದ್ಯುತ್ ಚಾಲಿತ ನೀತಿಯನ್ನು ಅನುಷ್ಟಾನಗೊಳಿಸಲಾಗಿತ್ತು. ರಾಷ್ಟ್ರ ರಾಜಧಾನಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ಶೇಕಡಾ 13 ರಷ್ಟು ಎಲೆಕ್ಟ್ರಿಕ್ ವಾಹನಗಳು ಎಂಬುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಆಗಸ್ಟ್ 2020 ರಿಂದ 1. 28 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ನೀತಿ ಆಯೋಗ ಕೂಡಾ ದೆಹಲಿ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಶ್ಲಾಘಿಸಿದೆ ಎಂದು ಅವರು ಹೇಳಿದರು.
ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು, ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಅದೊಂದು ಜನಾಂದೋಲನವಾಗಿ ಮಾರ್ಪಟ್ಟಿದೆ. ದೇಶದಾದ್ಯಂತ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದೇವೆ. ದೇಶಾದ್ಯಂತ ಮೂರನೇ ಒಂದು ಭಾಗದಷ್ಟು ಚಾರ್ಜಿಂಗ್ ಸ್ಟೇಷನ್‌ಗಳು ದೆಹಲಿಯಲ್ಲಿವೆ ಎಂದು ಅವರು ಹೇಳಿದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…