BREAKING NEWS

ದೆಹಲಿ ದೇಶದ ಎಲೆಕ್ಟ್ರಿಕ್ ವಾಹನಗಳ ರಾಜಧಾನಿ: ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ತಿಳಿಸಿದರು.

ಮಾಲಿನ್ಯವನ್ನು ಕಡಿಮೆಗೊಳಿಸಲು ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಆರಂಭಿಸಿದೇವು. 2020ರಲ್ಲಿ ವಿದ್ಯುತ್‌ ವಾಹನಗಳಿಗಾಗಿ ನೀತಿಯೊಂದನ್ನು ರೂಪಿಸಿದೇವು ಮತ್ತು  2025 ರ ವೇಳೆಗೆ ದೆಹಲಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಎಲೆಕ್ಟ್ರಿಕ್ ಆಗಿರುವ ಗುರಿ ಹೊಂದಿದ್ದೇವೆ ಎಂದರು.

ದೆಹಲಿಯನ್ನು ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ 2020ರಲ್ಲಿ ದೆಹಲಿ ವಿದ್ಯುತ್ ಚಾಲಿತ ನೀತಿಯನ್ನು ಅನುಷ್ಟಾನಗೊಳಿಸಲಾಗಿತ್ತು. ರಾಷ್ಟ್ರ ರಾಜಧಾನಿಯಲ್ಲಿ  ಖರೀದಿಸಿದ ಎಲ್ಲಾ ವಾಹನಗಳಲ್ಲಿ ಶೇಕಡಾ 13 ರಷ್ಟು ಎಲೆಕ್ಟ್ರಿಕ್ ವಾಹನಗಳು ಎಂಬುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಆಗಸ್ಟ್ 2020 ರಿಂದ  1. 28 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ನೀತಿ ಆಯೋಗ ಕೂಡಾ ದೆಹಲಿ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಶ್ಲಾಘಿಸಿದೆ ಎಂದು ಅವರು ಹೇಳಿದರು.

ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು, ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಅದೊಂದು ಜನಾಂದೋಲನವಾಗಿ ಮಾರ್ಪಟ್ಟಿದೆ.  ದೇಶದಾದ್ಯಂತ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದೇವೆ. ದೇಶಾದ್ಯಂತ ಮೂರನೇ ಒಂದು ಭಾಗದಷ್ಟು ಚಾರ್ಜಿಂಗ್ ಸ್ಟೇಷನ್‌ಗಳು ದೆಹಲಿಯಲ್ಲಿವೆ ಎಂದು ಅವರು ಹೇಳಿದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago