ನವದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ದೀಪಕ್ ಬಾಕ್ಸರ್ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಸಹಾಯದಿಂದ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್ ಬಾಕ್ಸರ್ನನ್ನು ಮೆಕ್ಸಿಕೊದಲ್ಲಿ ಸೆರೆ ಹಿಡಿದಿದೆ.
ದೀಪಕ್ ಬಾಕ್ಸರ್ ಬಂಧನಕ್ಕಾಗಿ ಎಫ್ಬಿಐ ಸೇರಿದಂತೆ ಮೆಕ್ಸಿಕೊದ ಪೊಲೀಸರು ನಮಗೆ ಸಹಾಯ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಸಿಪಿ) ಎಚ್ಜಿಎಸ್ ಧಲಿವಾಲ್ ಅವರು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
‘ದೆಹಲಿ-ಎನ್ಸಿಆರ್ನಲ್ಲಿ ವ್ಯಾಪ್ತಿಯಲ್ಲಿ ದೀಪಕ್ ಬಾಕ್ಸರ್ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಆಗಿದ್ದ. ಆತನಿಗಾಗಿ ದೆಹಲಿಯ ವಿಶೇಷ ತಂಡ ಹಲವು ತಿಂಗಳಿಂದ ಹುಡುಕಾಟ ನಡೆಸಿತ್ತು’ ಎಂದು ಧಲಿವಾಲ್ ತಿಳಿಸಿದ್ದಾರೆ.
ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್ಸ್ಟರ್ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು ₹3 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು.
2021ರಲ್ಲಿ ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್ ‘ಗೋಗಿ ಗ್ಯಾಂಗ್’ ಅನ್ನು ಮುನ್ನಡೆಸಲು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…