BREAKING NEWS

ದೆಹಲಿ v/s ಕೇಂದ್ರ ಸರ್ಕಾರ| ಚುನಾಯಿತ ಸರ್ಕಾರಕ್ಕೆ ಆಡಳಿತದ ಮೇಲೆ ಅಧಿಕಾರ: ಸುಪ್ರೀಂ ತೀರ್ಪು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ.

ರಾಷ್ಟ್ರರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ದೆಹಲಿ ಸರ್ಕಾರವೇ ನಿಯಂತ್ರಣ ಹೊಂದಿರಬೇಕು. ಚುನಾಯಿತ ಸರ್ಕಾರ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಹೊಂದಿರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್‌ ನ ಸಿಜೆಐ ಡಿವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಒಮ್ಮತದ ತೀರ್ಪಿನಲ್ಲಿ ತಿಳಿಸಿದೆ.

ಸಾಂವಿಧಾನಿಕ ಪೀಠದಲ್ಲಿ ಸಿಜೆಐ ಹಾಗೂ ಜಸ್ಟೀಸ್‌ ಎಂಆರ್‌ ಶಾ, ಜಸ್ಟೀಸ್‌ ಕೃಷ್ಣಾಮೂರ್ತಿ, ಜಸ್ಟೀಸ್‌ ಹಿಮಾ ಕೊಹ್ಲಿ ಮತ್ತು ಜಸ್ಟೀಸ್‌ ಪಿಎಸ್‌ ನರಸಿಂಹ ಅವರನ್ನೊಳಗೊಂಡಿದ್ದು, ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂಬ 2019ರ ಜಸ್ಟೀಸ್‌ ಅಶೋಕ್‌ ಭೂಷಣ್‌ ಅವರ ತೀರ್ಪನ್ನು ಒಪ್ಪಲು ನಿರಾಕರಿಸಿದೆ.

ಪ್ರಜಾಪ್ರಭುತ್ವ ಮತ್ತು ಫೆಡರಲ್‌ ವ್ಯವಸ್ಥೆ ಸಾಂವಿಧಾನಿಕ ವ್ಯವಸ್ಥೆಯ ಮೂಲಭೂತ ಭಾಗವಾಗಿದೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago