ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರ ವಜಾಕ್ಕೆ ಆಗ್ರಹ

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಕಬಳಿಕೆ ಪ್ರಕರಣದಲ್ಲಿ ನಂದೀಶ್‌ ಹಂಚೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಸಾಹಿತಿಗಳು ಹಾಗೂ ಹೋರಾಟಗಾರರು, ಕೂಡಲೇ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿವೇಶನ ಕಬಳಿಕೆಗೆ ಸಹಕರಿಸಿದ ಮುಡಾ ಆಯುಕ್ತರನ್ನೂ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸಾಹಿತಿಗಳಾದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್‌, ನಿವೃತ್ತ ಪ್ರಾಧ್ಯಾಪಕ ಮಹೇಶ್‌ಚಂದ್ರ ಗುರು, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್‌ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ವಿಜಯನಗರ 4ನೇ ಹಂತದಲ್ಲಿ 4 ಕೋಟಿ ರೂ. ಬೆಲೆ ಬಾಳುವ ನಿವೇಶನವನ್ನು ನಂದೀಶ್‌ ಹಂಚೆ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ. ಇದಕ್ಕೆ ಮುಡಾ ಆಯುಕ್ತರೂ ಸಹಕರಿಸಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ.

× Chat with us