ಮುಂಬೈ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ “ಅವಹೇಳನಕಾರಿ” ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುಲಾಮ್ ಖಾಜಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 509, 500,506 (2) ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆರೋಪಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಮತ್ತಿತರ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.