BREAKING NEWS

ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವ ಕೆ.ಎಸ್‌. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ

ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.

ತಮ್ಮ ವಿರುದ್ಧ ಆರೋಪ ಕೇಳಿ ಬಂದ ಕಾರಣಕ್ಕೆ ರಮೇಶ್ಜಾರಕಿಹೊಳಿ ಹಾಗೂ ಕೆ.ಎಸ್‌. ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ಇಬ್ಬರು ನಾಯಕರು ಮತ್ತೆ ಸಂಪುಟ ಸೇರಿದರೆ ತಾವು ದೋಷ ಮುಕ್ತರೆಂಬ ಸಂದೇಶ ರವಾನೆ ಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಎನ್ನ ಲಾಗಿದೆ. ವಿಧಾನ ಸಭೆ ಚುನಾವಣೆಗೆ ಆರು ತಿಂಗಳಷ್ಟೇ ಬಾಕಿಯಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಕ್ಷೀಣಿಸಿದೆ. ಆರೋಪಮುಕ್ತರಾದ ಸಂದೇಶ ರವಾನಿಸುವ ಚಿಂತನೆಯಲ್ಲಿರುವವರು, ಅಲ್ಪಾವಧಿಯಿದ್ದರೂ ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವವರಷ್ಟೇ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ.

 

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago