Mysore
15
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯ ಹಿಡೆನ್‌ ಅಜೆಂಡಾ: ಸಿಎಂ

ಬೆಂಗಳೂರು: ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಬಿಜೆಪಿ ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!