ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಶುಕ್ರವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ ಅವರು, ಶನಿವಾರ ತಡರಾತ್ರಿ ಉಸಿರಾಟದಲ್ಲಿ ತೊಂದರೆ ಉಂಟಾಗಿ ಬೆಳಗ್ಗಿನ ಜಾವ 3 ಗಂಟೆಗೆ ನಿಧನರಾಧರು.
ಮೃತರ ಪಾರ್ಥಿವ ಶರೀರ ನೋಡಲು ಅವರ ಸ್ವಗೃಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಎಲ್ಲ ಪಕ್ಷದ ರಾಜಕೀಯ ಮುಖಂಡರು, ಕಾರ್ಯಕರ್ತರು ತಂಡೋಪ ತಂಡವಾಗಿ ಆಗಮಿಸಿ, ಅಂತಿಮ ವಂದನೆ ಸಲ್ಲಿಸಿರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸೇರಿದಂತೆ ಗಣ್ಯರು ಭೇಟಿ ನೀಡಿ ಪುಪ್ಪ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಒಂದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ವೆಂಕಟಸ್ವಾಮಿ ಅವರು ಎರಡು ಬಾರಿ ಸೋಲು ಅನುಭವಿಸಿದ್ದರು. ಪ್ರಸ್ತಕ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ದೇವನಹಳ್ಳಿಯ ವಿಜಯಪುರ ಭಾಗದ ಭಟ್ರೇನಹಳ್ಳಿ ಯಿಂದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಪ್ರಾರಂಭಿಸಿದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದರು.
ಟಿಕೆಟ್ ಘೋಷಣೆಗೂ ಮುನ್ನವೇ ವೆಂಕಟಸ್ವಾಮಿ ಅವರಿಗೆ ಮಾರ್ಚ್ 22ರಂದು ಲಘು ಹೃದಯಾಘಾತ ಆಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕ್ಷೇತ್ರಕ್ಕೆ ಮರಳಿದ್ದರು. ಅನಾರೋಗ್ಯವನ್ನು ಲೆಕ್ಕಿಸದೇ ಟಿಕೆಟ್ ಘೋಷಣೆ ಬಳಿಕ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ ಶಮನಗೊಳಿಸಿದ್ದರು.
ದೆಹಲಿಯಲ್ಲಿ ಲಾಭಿ ನಡೆಸಿ ಟಿಕೆಟ್ ಪಡೆದಿದ್ದರು: 2008 ವಿಧಾನ ಸಭಾ ಚುನಾವಣೆಯಲ್ಲಿ ಅಂದಿನ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯರ ಬೆಂಬಲದೊಂದಿಗೆ ದೆಹಲಿಗೆ ತೆರಳಿ ಲಾಭಿ ನಡೆಸಿ ಟಿಕೆಟ್ ತಂದಿದ್ದ ವೆಂಕಟಸ್ವಾಮಿ ಅವರು ಜಯ ಸಾಧಿಸಿದ್ದಾರೆ.
ತಾಲ್ಲೂಕಿನ ಮಿನಿ ವಿಧಾನ ಸೌಧ, ಅಂಬೇಡ್ಕರ್ ಭವನ, ಸರ್ಕ್ಯೂಟ್ ಹೌಸ್, ಆರ್‌ಟಿಓ ಕಚೇರಿಗಳ ನಿರ್ಮಾಣಕ್ಕೆ ಬಿಎಸ್ ಯಡಿಯೂರಪ್ಪರ ಸರ್ಕಾರದಲ್ಲಿ ಅನುದಾನ ತಂದು, ಶಂಕುಸ್ಥಾಪನೆ ನೆರವೇರಿಸಿದ್ದರು.
ಕುಟುಂಬಸ್ಥರಿಗೆ ಟಿಕೆಟ್ ನೀಡಲು ಒತ್ತಾಯ: ವೆಂಕಟಸ್ವಾಮಿ ಕುಟುಂಬಸ್ಥರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಅವರ ಕುಟುಂದವರಿಗೆ ಟಿಕೆಟ್ ನೀಡಿದರೆ ಅನುಕುಂಪದಲ್ಲಿ ಆಧಾರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ ಎಂಬ ಚರ್ಚೆ ಅವರ ಪಾರ್ಥಿವ ಶರೀರದ ಮುಂದೆ ನಡೆದವು. ಭೋವಿ ಸಮುದಾಯದ ಮುಖಂಡರು ಭಾನುವಾರ ಈ ಕುರಿತು ಹೈಕಮಾಂಡ್‌ಗೆ ಒತ್ತಡ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…
ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…