BREAKING NEWS

ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕರಿಲ್ಲದ್ದಕ್ಕೆ ಸಿದ್ದರಾಮಯ್ಯರನ್ನು ಆಮದು ಮಾಡಿಕೊಂಡಿದ್ದೀರಾ ? : ಲೆಹರ್ ಸಿಂಗ್

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರು ಇಲ್ಲದ ಕಾರಣಕ್ಕೆ ಜೆಡಿಎಸ್‍ನಿಂದ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲಾಯಿತೇ? ಎಂದು ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್ ಅವರು ಸಚಿವ ಎಂ.ಬಿ.ಪಾಟೀಲ್‍ಗೆ ಪ್ರಶ್ನಿಸಿದ್ದಾರೆ.

ವಿಪಕ್ಷ ನಾಯಕನಾಗಲು ಬಿಜೆಪಿಯಲ್ಲಿ ಸಮರ್ಥರಿಲ್ಲವೇ? ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಲೆಹರ್ ಸಿಂಗ್, ಹಾಗಾದರೆ ಕಾಂಗ್ರೆಸ್‍ನಲ್ಲೂ ಸಮರ್ಥ ನಾಯಕರಿಲ್ಲದೆ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡಿದ್ದೀರ ಎಂದು ಮರುಪ್ರಶ್ನೆ ಮಾಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ವಿಪಕ್ಷ ನಾಯಕರಾಗಲು ಸಮರ್ಥರಿಲ್ಲವೇ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಂದಾಳತ್ವ ವಹಿಸಲು ಬಿಜೆಪಿಯವರು ಏಕೆ ಕೇಳುತ್ತಿದ್ದಾರೆ ಎಂಬ ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮೊದಲು ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗಲು ಸಮರ್ಥ ನಾಯಕರಿರಲಿಲ್ಲವೇ ಎಂಬುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
ಜೆಡಿಎಸ್ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಆಮದು ಮಾಡಿಕೊಂಡಿದ್ದು ಏಕೆ? ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಅಥವಾ ಎಂ.ಬಿ.ಪಾಟೀಲ್ ಅವರನ್ನೇ ಏಕೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

8 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

8 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

8 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

8 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

8 hours ago