ಬೆಂಗಳೂರು: ಬಾಬಾ ರಾಮ್‌ದೇವ್ ಒಡೆತನದ ಪತಂಜಲಿ ಜಾಹೀರಾತುಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಉತ್ತರಾಖಮಡ್ ಔಷಧ ಪರಾವನಗಿ ಹಾಗೂ ನಿಯಂತ್ರಣ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟಗಳನ್ನು ಪರಿಶೀಲನೆ ನಡೆಸಲು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಅಪರಾಧವಾಗಿದೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ನೀವು ಕುರುಡು ನಂಬಿಕೆಯನ್ನು ಹೊಂದಿರುವಾಗ ಈ ರೀತಿಯ ಘಟನೆಗಳು ಸಂಭವಿಸುತ್ತದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.





