ಬೆಂಗಳೂರು: ಬಾಬಾ ರಾಮ್‌ದೇವ್ ಒಡೆತನದ ಪತಂಜಲಿ ಜಾಹೀರಾತುಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಉತ್ತರಾಖಮಡ್ ಔಷಧ ಪರಾವನಗಿ ಹಾಗೂ ನಿಯಂತ್ರಣ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟಗಳನ್ನು ಪರಿಶೀಲನೆ ನಡೆಸಲು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಅಪರಾಧವಾಗಿದೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ನೀವು ಕುರುಡು ನಂಬಿಕೆಯನ್ನು ಹೊಂದಿರುವಾಗ ಈ ರೀತಿಯ ಘಟನೆಗಳು ಸಂಭವಿಸುತ್ತದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…