BREAKING NEWS

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ ಆರೋಗ್ಯ ಸಚಿವ!

ಬೆಂಗಳೂರು: ಬಾಬಾ ರಾಮ್‌ದೇವ್‌ ಒಡೆತನದ ಪತಂಜಲಿ ಜಾಹೀರಾತುಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಉತ್ತರಾಖಮಡ್‌ ಔಷಧ ಪರಾವನಗಿ ಹಾಗೂ ನಿಯಂತ್ರಣ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟಗಳನ್ನು ಪರಿಶೀಲನೆ ನಡೆಸಲು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರು ಅವರು, ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಅಪರಾಧವಾಗಿದೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ನೀವು ಕುರುಡು ನಂಬಿಕೆಯನ್ನು ಹೊಂದಿರುವಾಗ ಈ ರೀತಿಯ ಘಟನೆಗಳು ಸಂಭವಿಸುತ್ತದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago