Mysore
17
scattered clouds

Social Media

ಶುಕ್ರವಾರ, 10 ಜನವರಿ 2025
Light
Dark

ಧಾರವಾಡದಿಂದ ಪಕ್ಷೇತರ ಅಭ್ಯರ್ಥಿಯಾಗಿ ಲೋಕ ಕಣಕ್ಕಿಳಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸ್ಪರ್ಧಿಸುತ್ತಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಯುವ ಕಾಂಗ್ರೆಸ್​ ಘಟಕದ ಜಿಲ್ಲಾಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಗೆ ಕ್ಷೇತ್ರದಿಂದ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ನಡುವೆ ಸ್ವಾಮೀಜಿಗಳು ತಾವು ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಬಗ್ಗೆ ತಿಳಿಸಿದ್ದಾರೆ.

ಪ್ರಹ್ಲಾದ್​ ಜೋಶಿಗೆ ಪ್ರತಿಸ್ಪರ್ಧಿಯಾಗಿ ವಿನೋದ ಅಸೂಟಿ ಹೆಸರು ಘೋಷಿಸಿದ ನಂತರವೂ ಕ್ಷೇತ್ರದಲ್ಲಿ ಅಷ್ಟೊಂದು ಬೆಳವಣಿಗೆಗಳು ಕಂಡು ಬರಲಿಲ್ಲ. ಆದರೆ ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿಯ ಆಗಮನದವರೆಗು ಶಾಂತವಾಗಿಯೇ ಇದ್ದ ಕ್ಷೇತ್ರ, ಸ್ವಾಮೀಜಿಯವರ ಆಗಮನ ನಂತರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಬಿಜೆಪಿಯಿಂದ ಜೋಶಿಗೆ ಟಿಕೆಟ್‌ ನೀಡಬೇಡಿ ಎಂದು ದಿಂಗಾಲೇಶ್ವರ ಸ್ವಾಮಿಗಳು ಎನ್‌ಡಿಎ ತಿಳಿಸಿದ್ದರು. ಇದ್ಯಾವುದನ್ನು ಕ್ಯಾರೆ ಎನ್ನದ ಎನ್‌ಡಿಎ ವಿರುದ್ಧ ಅಸಮಧಾನಗೊಂಡ ಸ್ವಾಮಿಜಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

Tags: