BREAKING NEWS

ರಾಜ್ಯದ ದೇವಸ್ಥಾನಗಳಲ್ಲಿ ಹಿರಿಯ ನಾಗರೀಕರಿಗೆ ನೇರ ದರ್ಶನ ಸೌಲಭ್ಯ: ಸರ್ಕಾರ ಆದೇಶ

ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗೂ ‘ಬಿ’ ವರ್ಗ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧವಂತರ ಒಕ್ಕೂಟ ಮನವಿ ಮಾಡಿತ್ತು.

65 ವರ್ಷ ಮೇಲ್ಪಟ್ಟ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ವಯಸ್ಸಿನ ಆಧಾರದ ಮೇಲೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಒಕ್ಕೂಟವು ಮನವಿ ಪತ್ರದಲ್ಲಿ ಉಲ್ಲೇಖಿಸಿತ್ತು. ಸದ್ಯ ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ.

ಯಾವ ಯಾವ ದೇವಸ್ಥಾನಗಳಲ್ಲಿ ಅನ್ವಯ?: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ ಈ ಸೌಲಭ್ಯ ಸಿಗಲಿದೆ. ಸದ್ಯ ಕುಕ್ಕೆ ಸುಬ್ರಮಣ್ಯ, ಚಾಮುಂಡಿಬೆಟ್ಟ, ಸಿಗಂದೂರು, ಕೊಲ್ಲೂರು ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ದೇವಸ್ಥಾನಗಳೂ ಕೂಡಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿವೆ.

ಪ್ರತ್ಯೇಕ ವ್ಯವಸ್ಥೆಗೆ ಸೌಲಭ್ಯ ನೀಡಿ: ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಗಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿದೆ. ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

ಹಿರಿಯ ನಾಗರೀಕರ ಸಹಾಯ ಕೇಂದ್ರ ಸ್ಥಾಪಿಸಿ: ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು, ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.

ವಯಸ್ಸಿನ ದಾಖಲೆ ನೀಡಬೇಕು: ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago