BREAKING NEWS

ವಿಪತ್ತು ಪರಿಹಾರ ನಿಧಿ: 22 ರಾಜ್ಯಗಳಿಗೆ ಕೇಂದ್ರದಿಂದ ರೂ.7,532 ಕೋಟಿ ಬಿಡುಗಡೆ

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ದೇಶಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒದಗಿಸಲಾದ ಮೊತ್ತದ ಬಳಕೆಯ ಪ್ರಮಾಣಪತ್ರಕ್ಕಾಗಿ ಕಾಯದೆ ರಾಜ್ಯಗಳಿಗೆ ತಕ್ಷಣದ ಸಹಾಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾ ಸಾಮಾನ್ಯ ರಾಜ್ಯಗಳಲ್ಲಿ ಎಸ್‌ಡಿಆರ್‌ಎಫ್‌ಗೆ ಶೇಕಡಾ 75 ಮತ್ತು ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಲ್ಲಿ ಶೇಕಡಾ 90 ರಷ್ಟು ಕೊಡುಗೆ ನೀಡುತ್ತದೆ. ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಾರ್ಷಿಕ ಎರಡು ಸಮಾನ ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಮಾರ್ಗಸೂಚಿಗಳ ಪ್ರಕಾರ, ಹಿಂದಿನ ಕಂತಿನಲ್ಲಿ ಬಿಡುಗಡೆಯಾದ ಮೊತ್ತದ ಬಳಕೆಯ ಪ್ರಮಾಣಪತ್ರದ ಸ್ವೀಕೃತಿ ಮತ್ತು ಎಸ್‌ಡಿಆರ್‌ಎಫ್‌ನಿಂದ ಕೈಗೊಂಡ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ವರದಿಯನ್ನು ಸ್ವೀಕರಿಸಿದ ನಂತರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
andolanait

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

2 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

2 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

3 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

3 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

3 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

3 hours ago