BREAKING NEWS

ಜಿಲ್ಲಾಮಟ್ಟದ ಜನತಾ ದರ್ಶನ: ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಮಸ್ಯೆ ಬಗೆಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನತಾ ದರ್ಶನ ಹಿನ್ನೆಲೆ ತಾಲ್ಲೂಕಿನಲ್ಲಿ ಹೋಬಳಿವಾರು ಅರ್ಜಿ ಕರೆದಿದ್ದು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 167 ಅರ್ಜಿದಾರರ ಅಹವಾಲನ್ನು ಸ್ವೀಕರಿಸಿ, ಸಮಸ್ಯೆ ಆಲಿಸಿದರು. ಅದಲ್ಲದೆ, ಅರ್ಜಿ ಸಲ್ಲಿಸದೆ ಇದ್ದಂತಹ ಜನರನ್ನೂ ಕರೆದು ಅವರ ಕುಂದು ಕೊರತೆಗಳನ್ನು ವಿಚಾರಿಸಿದರು.

ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲೆಗಳಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಸೂಚನೆ ನೀಡಿದ್ದರು. ಅದರಂತೆ ಮೊದಲಿಗೆ ಮೈಸೂರಿನಲ್ಲಿ ನಡೆಸಿ ಸ್ವೀಕರಿಸಿದ್ದ ಅಹವಾಲುಗಳಲ್ಲಿ ಶೇ.98 ರಷ್ಟನ್ನು ಬಗೆಹರಿಸಲಾಗಿದೆ ಎಂದು ಹೇಳಿದರು.

ಮೊನ್ನೆ ನಮ್ಮ ಮುಖ್ಯಮಂತ್ರಿಗಳು ನಡೆಸಿದ ಜನಸ್ಪಂದನ ಕಾರ್ಯಕ್ರದಲ್ಲಿ ಮುಗ್ಧಜನರು ತಮ್ಮ ನೋವನ್ನು ತೋಡಿಕೊಂಡ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿ ವರ್ಗಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಇದರ ಅಂಗವಾಗಿ ತಿ.ನರಸೀಪುರ ತಾಲ್ಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಕಷ್ಟವನ್ನು ಕೇಳಲಾಗುತ್ತಿದೆ ಎಂದು ತಿಳಿಸಿದರು.

ಆಡಳಿತ ಚುರುಕುಗೊಳಿಸಿ, ಜನಪರವಾದ ಆಡಳಿತದ ವಾತಾವರಣ ಸೃಷ್ಟಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಸಂಕಷ್ಟದಲ್ಲಿರುವ ಜನರು ನೇರವಾಗಿ ಬಂದು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಡಿ.15 ನಂತರ ಎಲ್ಲಾ ತಾಲ್ಲೂಕಿನಲ್ಲೂ ಜನತದರ್ಶನ: ವಿಧಾನ ಸಭೆಯ ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 15 ನಂತರ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಿ ಜ‌ನರ ಸಮಸ್ಯೆಗಳನ್ನು ಆಲಿಸಲಾಗುವುದು. ಜಿಲ್ಲಾಡಳಿತ, ತಾಲ್ಲೂಕು ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರು ತಿಂಗಳುಗಟ್ಟಲೆ ತಮ್ಮ ಸಮಸ್ಯೆಗಳ ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದು ಎಂಬುದು ಮೂಲ ಉದ್ದೇಶವಾಗಿದೆ ಎಂದರು.

ವಂಚಿತ ಗೃಹಲಕ್ಷ್ಮಿಯರ ಖಾತೆಗೆ ಹಣ ಗ್ಯಾರಂಟಿ: ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ 528 ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂಬ ಮಾಹಿತಿ ಇದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚಿಸಿದ್ದೇನೆ. ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡಲಾಗುವುದು ಎಂದು ತಿಳಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago