ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಪೀಠೋಪಕರಣ ಭಸ್ಮ
ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಟ್ಟಡದಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿ ಶಾಮಕ ದಳದ ತಂಡಗಳು ಸುಮಾರು ಅರ್ಧಗಂಟೆ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿವೆ.
ಬೆಳಗ್ಗಿನ ಜಾವ ಆರು ಗಂಟೆ ಸುಮಾರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿರುವ ಹಳೇ ಪ್ರಾಧಿಕಾರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂದಿ, ವಾಹನ ಚಾಲಕರು ಬೆಂಕಿಯನ್ನು ಕಂಡು ತಮ್ಮ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಬೆಂಕಿ ದುರಂತದಲ್ಲಿ ಪೀಠೋಪಕರಣಗಳು,ಸೈಬರ್ ಟಿ.ವಿ., ಮಕ್ಕಳ ಡ್ರಾಯಿಂಗ್ ಪರಿಕರಗಳು ನಾಶವಾಗಿವೆ. ಅಗ್ನಿಶಾಮಕ ಠಾಣೆಗೆ ಕರೆ ಬಂದ ಮೇರೆಗೆ ಸುಮಾರು ಐದಾರು ಅಗ್ನಿಶಾಮಕ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಘಟನೆ ಸಂಬಂಧ ಆಂದೋಲನ ಡಿಜಿಟಲ್ ತಂಡಕ್ಕೆ ಮಾಹಿತಿ ನೀಡಿದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಅವರು, ಕಚೇರಿಯ ಟೇಬಲ್,ಕುರ್ಚಿ,ಸೈಬರ್ ಟಿ.ವಿ.,ಮಹಿಳಾ ಮತ್ತು ಮಕ್ಕಳ ವಿಭಾಗದ ಕೊಠಡಿಯಲ್ಲಿದ್ದ ಮೇಜು,ಕುರ್ಚಿ ಇತ್ಯಾದಿ ಪೀಠೋಪಕರಣಗಳು, ಮಕ್ಕಳ ಡ್ರಾಯಿಂಗ್ ಇತ್ಯಾದಿ ಪರಿಕರಗಳು ಸುಟ್ಟು ನಾಶವಾಗಿವೆ. ಎ ಮತ್ತು ಸಿ ಬ್ಲಾಕ್ ನಲ್ಲಿರುವ ವಸ್ತುಪ್ರದರ್ಶನ ಮಳಿಗೆಗಳಿಗೆ ಬೆಂಕಿ ಹರಡಿಲ್ಲ. ಹಳೆಯ ಕಟ್ಟಡವಾಗಿದ್ದು ಆಕಸ್ಮಿಕಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದವರು ಸ್ಪಷ್ಟಪಡಿಸಿದರು.
ನಜರಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…