BREAKING NEWS

ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು: ಹೈಕೋರ್ಟ್‌

ಬೆಂಗಳೂರು : ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪರಸ್ಪರ ಒಪ್ಪಿಗೆ ವಿಚ್ಛೇದನಕ್ಕಾಗಿ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ಉಲ್ಲೇಖಿಸಲಾದ ಒಂದು ವರ್ಷದ ಕೂಲಿಂಗ್ ಆಫ್ ಅವಧಿಯು ಕಡ್ಡಾಯವಲ್ಲ ಎಂದು ಹೇಳಿದೆ.

ಪತಿ-ಪತ್ನಿ ದೂರವಾಗಲು ಪ್ರಜ್ಞಾಪೂರ್ವಕ ನಿರ್ಧಾರದ ಹೊರತಾಗಿಯೂ ದಂಪತಿಗಳು ಅನಗತ್ಯವಾಗಿ ಕಾಯುವಂತೆ ಮಾಡುವುದು ಅವರ ಸಂಕಟವನ್ನು ಹೆಚ್ಚಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮನವಿಯನ್ನು ಸಲ್ಲಿಸಲು ಸಮಯವಾಕಾಶ ಮತ್ತು ಅರ್ಜಿಯನ್ನು ಸಲ್ಲಿಸುವ ದಿನಾಂಕದಿಂದ ಆರು ತಿಂಗಳ ಅವಧಿಯನ್ನು ಒದಗಿಸುವ ಉದ್ದೇಶವೆಂದರೆ, ಆರು ಅವಧಿಯ ನಂತರ ಇಬ್ಬರೂ ತಮ್ಮ ಮನಸ್ಸನ್ನು ಬದಲಾಯಿಸಬಹುದು ಮತ್ತು ಅವರ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂಬುದಾಗಿದೆ. ಆದರೆ ತಿಂಗಳುಗಳು ಕಳೆದ ಮೇಲೂ ಕಕ್ಷಿದಾರರು ವಿಚ್ಛೇದನದೊಂದಿಗೆ ಮುಂದುವರಿಯಲು ನಿರ್ಧರಿಸುತ್ತಾರೆ. ಹೀಗಾಗಿ ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು ಎಂದು ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ವಿಜಯಕುಮಾರ್ ಎ ಪಾಟೀಲ್ ಅವರ ವಿಭಾಗೀಯ ಪೀಠ ಹೇಳಿದೆ.

ಮದ್ವೆಯಾಗಿ ಮೂರೇ ತಿಂಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ 

ವಿಶೇಷ ವಿವಾಹ ಕಾಯ್ದೆಯಡಿ ನವೆಂಬರ್‌ 2022ರಲ್ಲಿ ಮದುವೆಯಾಗಿದ್ದ ಜೋಡಿ ಮೂರೇ ತಿಂಗಳಲ್ಲಿ ದಾಂಪತ್ಯದಲ್ಲಿ ಸಮಸ್ಯೆ ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮದುವೆಯಾದ ಒಂದೇ ವರ್ಷಕ್ಕೆ ‘ಕೂಲಿಂಗ್ ಆಫ್‌’ ಅವಧಿಯಲ್ಲಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾರಣ ನೀಡಿ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ಜೋಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಮಾತ್ರವಲ್ಲ, ‘ಇಬ್ಬರೂ ಪದವೀಧರರಾಗಿದ್ದು ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸಿ ಸಾಧ್ಯವಾಗದೆ ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವೃತ್ತಿಯ ಕಡೆಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ವಿವಾಹವಾದ ಒಂದು ವರ್ಷದಲ್ಲಿ ಹೊಂದಾಣಿಕೆಯಾಗಬಹುದು ಎಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಬಂಧವಿದೆ. ಇದು ಎಲ್ಲಾ ಪ್ರಕರಣಗಳಿಗೂ ಅನ್ವಯಿಸಲ್ಲ’ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಹಾಗೆಯೇ ವಿಚ್ಛೇದನ ಅರ್ಜಿಯನ್ನು ಮರುಪರಿಶೀಲಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಲಾಗಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago