ದೀಪಾವಳಿ: ಮಹದೇಶ್ವರಬೆಟ್ಟಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರಬೆಟ್ಟದಲ್ಲಿ ನ. 13 ರಿಂದ 16 ರವರೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ ಜಾತ್ರೆ, ರಥೋತ್ಸವ, ಎಣ್ಣೆ ಮಜ್ಜನ ಮತ್ತು ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ಕೊರೊನಾ ಹಿನ್ನೆಲೆಯಲ್ಲಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಹೊರತುಪಡಿಸಿ ಜಿಲ್ಲೆಯ ಹಾಗೂ ಅಂತರ ಜಿಲ್ಲೆಯ ಸಾರ್ವಜನಿಕ ರ ಪ್ರವೇಶವನ್ನು ಈ ಅವಧಿಯಲ್ಲಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.

× Chat with us