ಆಕ್ಸಿಜನ್‌ ದುರಂತ; ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದ ಡಿಕೆಶಿ!

ಚಾಮರಾಜನಗರ: ನಗರದಲ್ಲಿ ಆಕ್ಸಿಜನ್‌ ದುರಂತದಿಂದ ಮೃತಪಟ್ಟವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ವಿಚಾರವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಸಿಎಂ ಬಿಎಸ್‌ವೈ ಅವರು ಶಿವಮೊಗ್ಗಕ್ಕೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಅವರು ಮುಖ್ಯಮಂತ್ರಿಗಳು. ಇಡೀ ರಾಜ್ಯದ ಜನತೆಯ ಯೋಗಕ್ಷೇಮ, ಕಷ್ಟ-ಸುಖಗಳನ್ನು ಅವರು ವಿಚಾರಿಸುವುದು ಅವರ ಕರ್ತವ್ಯ ಎಂದು ನೆನಪಿಸಿದರು.

× Chat with us