ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ವಿಚಾರದ ಕುರಿತಾಗಿ ಹೈಕೋರ್ಟ್‌ನಲ್ಲಿ ಇಂದು ಡಿ.ಕೆ.ಶಿವಕುಮಾರ್ ವಿಚಾರಣೆ ನಡೆಯುತ್ತಿದೆ.
ಇಂದು ಬೆಳಗ್ಗೆಯಿಂದ ಹೈಕೋರ್ಟ್‌ನಲ್ಲಿ ಡಿಕೆಶಿ ಕೇಸ್ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಸದ್ಯ ಕೋರ್ಟ್ ವಿಚಾರಣೆಯನ್ನು ಕೆಲಕಾಲ ಮುಂದೂಡಿದೆ. ಇದಲ್ಲದೇ ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯನ್ನು ಡಿಕೆಶಿ ಪರ ವಕೀಲರು ಹಿಂಪಡೆದಿದ್ದಾರೆ.
ಇನ್ನು ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ತನ್ನ ಆದೇಶವನ್ನು ನೀಡಲಿದೆ ಎಂದು ತಿಳಿದು ಬಂದಿದೆ.