ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.
ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮೊದಲ ಕ್ಯಾಬಿನೆಟ್ನಲ್ಲೇ ಎಲ್ಲಾ ಗ್ಯಾರಂಟಿ ಇತ್ಯರ್ಥ ಮಾಡಿದ್ದೇವೆ. ಬಿಜೆಪಿಯವರದ್ದು ಭರವಸೆ, ನಮ್ಮದು ಗ್ಯಾರಂಟಿ. ಇಂದು ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದು, ನಾಡಿನೆಲ್ಲೆಡೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರ ಮನೆಗಳಲ್ಲಿ ಹೆಣ್ಣು ಮಕ್ಕಳು ಹಬ್ಬದ ಸಂಭ್ರಮದಲ್ಲಿದ್ದಾರೆ. 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯ, ನಾನು ಚೆಕ್ಗೆ ಸಹಿ ಹಾಕಿದ್ದು, ಯಜಮಾನಿಯರ ಬ್ಯಾಂಕ್ ಖಾತೆಗೆ 2000 ರೂ ಹಣ ಜಮೆಯಾಗುತ್ತೆ ಎಂದರು.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…